Топ-100
Back

ⓘ ಗಿರೀಶ್ ಕಾರ್ನಾಡ್ ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ ..



                                               

ಚಂದ್ರ (ಚಲನಚಿತ್ರ)

ಚಂದ್ರ 2013 ಮತ್ತು 2014ರಲ್ಲಿ ಕನ್ನಡ ಮತ್ತು ತಮಿಳು ಭಾಷೆಯಲ್ಲಿ ನಿರ್ಮಾಣವಾದ ಫ್ಯಾಂಟಸಿ ಚಲನಚಿತ್ರ. ಈ ಚಿತ್ರವನ್ನು ರೂಪ ಅಯ್ಯರ್ ನಿರ್ದೇಶನ ಮಾಡಿದ್ದಾರೆ. ಶ್ರಿಯಾ ಶರಣ್, ಪ್ರೇಮ್ ಕುಮಾರ್, ಶ್ರೀನಾಥ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವು ಕೊನೆಯ ತಲೆಮಾರಿನ ರಾಜಕುಮಾರಿಯ ಜೀವನ ಮತ್ತು ಅವಳ ಪ್ರೇಮಕಥೆಯ ಬಗ್ಗೆ ಹೇಳುತ್ತದೆ. ಈ ಚಿತ್ರವು 27 ಜೂನ್ 2013 ರಂದು ಸಕಾರಾತ್ಮಕ ವಿಮರ್ಶೆಗಳಿಗೆ ಬಿಡುಗಡೆಯಾಯಿತು ಮತ್ತು ಕನ್ನಡ ಗಲ್ಲಾಪೆಟ್ಟಿಗೆಯಲ್ಲಿ ಹೆಚ್ಚಿನ ಯಶಸ್ಸನ್ನು ಗಳಿಸಿತು.ಚಿತ್ರದ ತಮಿಳು ಆವೃತ್ತಿ 14 ಫೆಬ್ರವರಿ 2014 ರಂದು ಬಿಡುಗಡೆಯಾಯಿತು.

                                               

ಆ ದಿನಗಳು

೧೯೮೬ರ ಸಮಯದಲ್ಲಿ ಬೆಂಗಳೂರಿನಲ್ಲಿ ನಡೆದ ಭೂಗತ ಜಗತ್ತಿನ ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರವನ್ನು ಮಾಡಲಾಗಿದೆ. ಅಗ್ನಿ ಶ್ರೀಧರ್ ಬರೆದಿರುವ ದಾದಾಗಿರಿಯ ದಿನಗಳು ಪುಸ್ತಕದ ಕಥೆಯ ಮೇಲೆ ಈ ಚಿತ್ರವನ್ನು ಮಾಡಲಾಗಿದೆ.

                                               

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ೧೯೭೧–೧೯೭೬

ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ. ವಿವಿಧ ಕ್ಷೇತ್ರಗಳ ಗಣ್ಯರನ್ನು ಆಯ್ದು ಅವರಿಗೆ ಪ್ರಶಸ್ತಿ ನೀಡಲಾಗುತ್ತದೆ. ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರತಿ ವರ್ಷ ನವೆಂಬರ್ ೧ರಂದು ಬೆಂಗಳೂರಿನಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು ಪ್ರದಾನ ಮಾಡುತ್ತಾರೆ. ಪ್ರಶಸ್ತಿಯು ಒಂದು ಲಕ್ಷ ರೂಪಾಯಿಯ ಗೌರವಧನ, ೨೫ಗ್ರಾಂ ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ಇದಲ್ಲದೆ ಅರ್ಹ ಪುರಸ್ಕೃತರಿಗೆ ಸರಕಾರದ ವತಿಯಿಂದ ನಿವೇಶನಗಳನ್ನು ನೀಡುವ ಕ್ರಮವೂ ಜಾರಿಯಲ್ಲಿದೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಸಾಮಾನ್ಯವಾಗಿ ಅಕ್ಟೋಬರ್ ೩೧ರ ಸಂಜೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಪ್ರಕಟಿಸುತ್ತಾರೆ.

                                               

ಕಲ್‍ಯುಗ್ (ಚಲನಚಿತ್ರ)

ಕಲ್‍ಯುಗ್ 1981 ರ ಒಂದು ಹಿಂದಿ ಭಾಷೆಯ ಅಪರಾಧಕೇಂದ್ರಿತ ನಾಟಕೀಯ ಚಲನಚಿತ್ರ. ಇದನ್ನು ಶ್ಯಾಮ್ ಬೆನೆಗಲ್ ನಿರ್ದೇಶಿಸಿದ್ದಾರೆ. ಇದು ಭಾರತೀಯ ಮಹಾಕಾವ್ಯ ಮಹಾಭಾರತದ ಆಧುನಿಕ-ದಿನದ ಆವೃತ್ತಿಯೆಂದು ಕರೆಯಲ್ಪಡುತ್ತದೆ. ಇದು ಪ್ರತಿಸ್ಪರ್ಧಿ ವ್ಯಾಪಾರ ಸಂಸ್ಥೆಗಳ ನಡುವಿನ ಪ್ರಾತಿನಿಧಿಕ ಸಂಘರ್ಷವನ್ನು ಚಿತ್ರಿಸುತ್ತದೆ. ಕಲ್‍ಯುಗ್ 1982 ರಲ್ಲಿ ಫಿಲ್ಮ್‌ಫೇರ್ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದಿತು. ಚಿತ್ರಕಥೆ ಮತ್ತು ಕಥಾವಸ್ತುವು ಮಹಾಭಾರತಕ್ಕಿಂತ ಭಿನ್ನವಾಗಿದೆ. ಆದಾಗ್ಯೂ, ಪಾತ್ರೀಕರಣ ಮತ್ತು ಗಂಭೀರವಾದ ಘಟನೆಗಳು ಮಹಾಕಾವ್ಯದೊಂದಿಗೆ ಗಮನಾರ್ಹ ಹೋಲಿಕೆಯನ್ನು ಹೊಂದಿವೆ. ಶಶಿ ಕಪೂರ್, ರೇಖಾ, ರಾಜ್ ಬಬ್ಬರ್, ಸುಪ್ರಿಯಾ ಪಾಠಕ್, ಅನಂತ್ ನಾಗ್, ಕುಲ್‍ಭೂಷಣ್ ಖರ್ಬಂದಾ, ಸುಶ್ಮಾ ಸೇಠ್, ಆಕಾಶ್ ಖುರಾನಾ, ವಿಕ್ಟರ್ ಬ್ಯಾನರ್ಜಿ, ರೀಮ ...

ಗಿರೀಶ್ ಕಾರ್ನಾಡ್
                                     

ⓘ ಗಿರೀಶ್ ಕಾರ್ನಾಡ್

ಗಿರೀಶ್ ಕಾರ್ನಾಡ್ ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

                                     

1. ಜೀವನ

  • ಆ ಬಳಿಕ ರ್ಹೊಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದರು. ಗಿರೀಶ ಕಾರ್ನಾಡರು ಆಕ್ಸ್‌ಫರ್ಡ್‌ ಡಿಬೇಟ ಕ್ಲಬ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಆಗಿದ್ದಾರೆ. ತಮ್ಮ ಓದು, ಚರ್ಚೆಯನ್ನು ದೇಶ ವಿದೇಶದಲ್ಲೂ ಹರಡಿ ವಿದ್ವಾಂಸರ ಸಖ್ಯದಲ್ಲಿ, ಕಲಾಸೇವಕರ ಸಹವಾಸದಲ್ಲಿ ಗುರ್ತಿಸಿಕೊಂಡ ಕಾರ್ನಾಡ್ ಬುದ್ಧಿಜೀವಿ ಎನಿಸಿಕೊಂಡರು. ಬಹುಭಾಷಾ ಪಂಡಿತರೆಂಬ ಹಿರಿಮೆಗೆ ಪಾತ್ರರಾಗಿ, ಷಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ನಾಡ್ ಸೇವೆ ಸಲ್ಲಿಸಿದರು.
  • ಮುಂದೆ ಕಾರ್ನಾಡರಿಗೆ ಇಂಥ ಪ್ರಗತಿಪರ ವಾತಾವರಣವೇ ಅವರ ಬೆಳವಣಿಗೆಯಲ್ಲಿ ಸಹಾಯಕವಾಯಿತು. ಗಿರೀಶರ ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗೂ ಪದವಿ ಶಿಕ್ಷಣ ಕರ್ನಾಟಕ ಕಾಲೇಜಿನಲ್ಲಿ ಆಯಿತು.
  • ಆಕ್ಸ್‌ಫರ್ಡ್‌ನಿಂದ ಬಂದ ನಂತರ ಮದ್ರಾಸ್‌ನಲ್ಲಿ ಆಕ್ಸ್ ಫ಼ರ್ಡ್ ಯೂನಿವರ್ಸಿಟಿ ಪ್ರೆಸ್ ನಲ್ಲಿ ಸಂಪಾದಕರಾಗಿ ನೌಕರಿಯಲ್ಲಿದ್ದು, ಅದನ್ನು ತೊರೆದು ಧಾರವಾಡಕ್ಕೆ ವಾಪಾಸಾಗಿ ನಾಟಕ ಕ್ಷೇತ್ರದಲ್ಲಿ ಕೃಷಿ ನಡೆಸಿದರು.
  • ಗಿರೀಶ ಕಾರ್ನಾಡ್‌ರು ೧೯೩೮ ಮೇ ೧೯ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ತಂದೆ ಡಾ॥ ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿಶೀಲ ಮನೋಭಾವದ ಡಾ॥ ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದುಕೊಂಡರು.
  • ವಿದೇಶದಲ್ಲಿದ್ದಾಗಲೇ ಕನ್ನಡ ನಾಟಕಗಳನ್ನು ಬರೆದು ಇಲ್ಲಿಗೆ ಬಂದು ಹೊಸ ನಾಟಕಗಳ ಓದು, ಪ್ರದರ್ಶನಕ್ಕೆ ದಾರಿ ಮಾಡಿಕೊಂಡರು. ಇವರು ಕನ್ನಡವಲ್ಲದೆ ಹಿಂದಿ, ಪಂಜಾಬಿ, ಮರಾಠಿ ಹಾಗೂ ಭಾರತೀಯ ಹಲವು ಭಾಷೆಗಳಿಗೆ ತಮ್ಮ ನಾಟಕಗಳು ಅನುವಾದಗೊಂಡು, ಪ್ರದರ್ಶನಗೊಂಡವು.
  • ಬಾಲ್ಯದಲ್ಲೇ ಮದುವೆಯಾಗಿ ಪತಿಯನ್ನು ಕಳೆದುಕೊಂಡಿದ್ದ ೫ ವರ್ಷದ ಮಗ ವಸಂತನ ತಾಯಿ ಕೃಷ್ಣಾಬಾಯಿಯನ್ನು, ಸಮಾಜದ ವಿರೋಧದ ನಡುವೆಯೂ ದಿಟ್ಟತನದಿಂದ ಕೈ ಹಿಡಿದರು. ಸಮಾಜ ಏನೆನ್ನುತ್ತದೆ ಅನ್ನುವುದಕ್ಕಿಂತ ಆದರ್ಶ ಹಾಗೂ ಪ್ರಗತಿಪರತೆ ರಘುನಾಥ್ ಕಾರ್ನಾಡರಲ್ಲಿ ಕಂಡು ಬರುತ್ತದೆ.
                                     

2. ನಾಟಕ ರಚನೆ

ಇಂಗ್ಲೆಂಡಿಗೆ ತೆರಳುವ ಮೊದಲೆ ಗಿರೀಶ ಕಾರ್ನಾಡರ ಮೊದಲ ಸಾಹಿತ್ಯ ಕೃತಿ ಯಯಾತಿ ನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟವಾಯಿತು. ಇಂಗ್ಲೆಂಡಿನಿಂದ ಮರಳಿದ ಬಳಿಕ ತುಘಲಕ್ ಹಾಗೂ ಹಯವದನ ಪ್ರಕಟವಾದವು. ಈ ನಡುವೆ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್‍ನ ನಿರ್ದೇಶಕರಾಗಿದ್ದು, ಮತ್ತೆ ಅದನ್ನು ಬಿಟ್ಟು ಮುಂಬಯಿಗೆ ಬಂದ ಕಾರ್ನಾಡರು ಕೆಲವು ಚಲನಚಿತ್ರಗಳಲ್ಲಿ ನಟಿಸಿದರು. ಆ ರಂಗವನ್ನೂ ತ್ಯಜಿಸಿ ಮತ್ತೆ ಬೆಂಗಳೂರಿಗೆ ಬಂದರು. ಅಲ್ಲಿಂದ ರಚಿತವಾದ ಅವರ ನಾಟಕಗಳು- ಅಂಜು ಮಲ್ಲಿಗೆ, ನಾಗಮಂಡಲ, ತಲೆದಂಡ ಹಾಗೂ ಅಗ್ನಿ ಮತ್ತು ಮಳೆ.

ನಾಟಕಗಳು

  • ಹಯವದನ - ೧೯೭೨ನಾಟ್ಯರಂಗ ಪ್ರಶಸ್ತಿ
  • ಟಿಪ್ಪುವಿನ ಕನಸುಗಳು - ೧೯೯೭
  • ಯಯಾತಿ - ೧೯೬೧
  • ನಾಗಮಂಡಲ - ೧೯೯೦
  • ತುಘಲಕ್ - ೧೯೬೪
  • ತಲೆದಂಡ - ೧೯೯3
  • ಹಿಟ್ಟಿನ ಹುಂಜ ಅಥವಾ ಬಲಿ - ೧೯೮೦
  • ಬೆಂದ ಕಾಳು ಆನ್ ಟೋಸ್ಟ- ೨೦೧೨
  • ಅಂಜುಮಲ್ಲಿಗೆ - ೧೯೭೭
  • ಫ್ಲಾವರ್ಸ - ೨೦೧೨
  • ಮಾ ನಿಷಾಧ - ಏಕಾಂಕ ನಾಟಕ
  • ಮದುವೆ ಅಲ್ಬಮ್
  • ಅಗ್ನಿ ಮತ್ತು ಮಳೆ - ೧೯೯೫
  • ಒಡಕಲು ಬಿಂಬ - ೨೦೦೫

ಬ್ರಿಟಿಷ್ ಬ್ರಾಡ್‍ಕಾಸ್ಟಿಂಗ್ ಕಾರ್ಪೊರೇಶನ್‍ಗಾಗಿ ಭಾರತದ ಸ್ವಾತಂತ್ರೋತ್ಸವದ ೫೦ ವರ್ಷದ ನೆನಪಿನ ಕಾರ್ಯಕ್ರಮಕ್ಕಾಗಿ ಬರೆದುಕೊಟ್ಟ ನಾಟಕ- ಟಿಪ್ಪುವಿನ ಕನಸುಗಳು.

                                     

3. ಚಿತ್ರರಂಗ

  • ಬಳಿಕ ರಾಷ್ಟ್ರಕವಿ ಕುವೆಂಪು ಅವರ ಕಾನೂರು ಸುಬ್ಬಮ್ಮ ಹೆಗ್ಗಡಿತಿ ಕಾದಂಬರಿಯನ್ನು ಆಧರಿಸಿ "ಕಾನೂರು ಹೆಗ್ಗಡಿತಿ"೧೯೯೯ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರವು ರಾಜ್ಯ ಪ್ರಶಸ್ತಿ, ರಾಷ್ಟ್ರೀಯ ಪುರಸ್ಕಾರ ಪಡೆದು, ಪನೋರಮಕ್ಕೂ ಆಯ್ಕೆಯಾಯಿತು.
  • ಮುಂದೆ ತಬ್ಬಲಿಯು ನೀನಾದೆ ಮಗನೆ೧೯೭೭, ಕಾಡು೧೯೭೪, ಒಂದಾನೊಂದು ಕಾಲದಲ್ಲಿ೧೯೭೮ ಚಿತ್ರಗಳನ್ನು ನಿರ್ದೇಶಿಸಿದರು. ಕಾಡು ಹಲವಾರು ಪ್ರಶಸ್ತಿ ಪುರಸ್ಕಾರ ಪಡೆಯಿತು.
  • ಪರಿಸರ ವಿನಾಶ ಕುರಿತು ಚೆಲುವಿ ಎಂಬ ಕಿರುಚಿತ್ರವನ್ನು ನಿರ್ದೇಶಿಸಿದರು.
  • ಆ ನಂತರ ಎಸ್.ಎಲ್. ಭೈರಪ್ಪನವರ ವಂಶವೃಕ್ಷ ಕಾದಂಬರಿಯನ್ನು ಆಧರಿಸಿ, ಬಿ. ವಿ. ಕಾರಂತರ ಜೊತೆಗೂಡಿ ವಂಶವೃಕ್ಷ೧೯೭೨ ಚಿತ್ರವನ್ನು ನಿರ್ದೇಶನ ಮಾಡಿದರು. ಇದು ಹಲವಾರು ರಾಷ್ಟ್ರೀಯ, ಅಂತರರಾಷ್ಟ್ರೀಯ ಪುರಸ್ಕಾರ ಪಡೆಯಿತು. ನಿರ್ಮಾಣ: ಜಿ.ವಿ.ಅಯ್ಯರ್.
  • ಸಂಸ್ಕಾರ೧೯೭೦ ಚಲನಚಿತ್ರವು ಕನ್ನಡದ ಪ್ರಥಮ ಕಲಾತ್ಮಕ ಚಲನಚಿತ್ರ. ಯು.ಆರ್.ಅನಂತಮೂರ್ತಿಯವರ ಕಾದಂಬರಿಯನ್ನು ಆಧರಿಸಿದ ಈ ಚಲನಚಿತ್ರದಲ್ಲಿ ಗಿರೀಶ ಕಾರ್ನಾಡರದು ಪ್ರಮುಖ ಪಾತ್ರ-ಪ್ರಾಣೇಶಾಚಾರ್ಯರದು. ಪಿ.ಲಂಕೇಶ ಅವರದು ವಿರುದ್ಧ ವ್ಯಕ್ತಿತ್ವದ ಪಾತ್ರ-ನಾರಣಪ್ಪನದು. ಈ ಚಿತ್ರದ ನಿರ್ದೇಶಕರು ಪಟ್ಟಾಭಿರಾಮರೆಡ್ಡಿ ಅವರು ಮತ್ತು ಚಿತ್ರಕಥೆ ಗಿರೀಶ ಕಾರ್ನಾಡರದ್ದು. ಇದು ಕನ್ನಡಕ್ಕೆ ಪ್ರಥಮ ಸ್ವರ್ಣಕಮಲವನ್ನು ತಂದು ಕೊಟ್ಟ ಚಿತ್ರ.
  • ಇದಲ್ಲದೆ ಕನಕ ಪುರಂದರ, ದ.ರಾ.ಬೇಂದ್ರೆ ಹಾಗು ಸೂಫಿ ಪಂಥ ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿದರು.
  • ೨೦೦೭ರಲ್ಲಿ ತೆರೆಕಂಡ ಆ ದಿನಗಳು ಚಿತ್ರಕ್ಕೆ ಅಗ್ನಿ ಶ್ರೀಧರ ಅವರ ಜೊತೆಗೂಡಿ ಚಿತ್ರಕಥೆಯನ್ನು ಬರೆದಿದ್ದಾರೆ.
  • ನಂತರ ಉತ್ಸವ್, ಗೋಧೂಳಿ ಎಂಬ ಹಿಂದಿ ಚಿತ್ರಗಳನ್ನು ನಿರ್ದೇಶಿಸಿದರು.


                                     

4. ಇತರೆ

  • ಒಂದಾನೊಂದು ಕಾಲದಲ್ಲಿ ಚಿತ್ರವನ್ನು ೧೯೭೭ರಲ್ಲಿ ನಿರ್ದೇಶಿಸುವಾಗ ಕಳರಿಪಯಟ್ಟು ಮತ್ತು ಮುಂತಾದ ಸಾಹಸಕಲೆಗಳನ್ನು ಮೊದಲ ಬಾರಿ ಕನ್ನಡ ತೆರೆಯಲ್ಲಿ ಅಳವಡಿಸಿದ ಹಿರಿಮೆ ಕಾರ್ನಾಡರದ್ದು.
  • ತಮ್ಮ ೪೨ರ ವಯಸ್ಸಿನಲ್ಲಿ ಕೊಡಗಿನ ವೀರಯೋಧ ಕೋದಂಡೇರ ಗಣಪತಿಯವರ ಪುತ್ರಿ, ಡಾ. ಸರಸ್ವತಿ ಗಣಪತಿಯವರನ್ನು ಅಧಿಕೃತವಾಗಿ ಮದುವೆಯಾದ ಗಿರೀಶರಿಗೆ ೨ ಮಕ್ಕಳು, ಶಾಲ್ಮಲಿ ರಾಧಾ ಮತ್ತು ರಘು ಅಮಯ್. ೧೦ ವರ್ಷಗಳ ಕಾಲ, ಲಿವ್-ಇನ್ ಆಗಿ ಸಂಸಾರ ನಡೆಸಿದ ಹಿರಿಮೆ ಕಾರ್ನಾಡರದು.
  • ತುಘಲಕ್ ನಾಟಕವನ್ನು ತಮ್ಮ ಮಿತ್ರ ಮತ್ತು ಸಹಾಯಕ ನಿರ್ದೇಶಕ ಕೃಷ್ಣ ಬಸರೂರುರೊಡಗೂಡಿ ಬರೆದಿದ್ದಾಗಿ, ಆ ನಾಟಕದ ಅರ್ಪಣೆಯಲ್ಲಿ ಹೇಳಿದ್ದಾರೆ.
  • ಇಬ್ಬರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕಾದಂಬರಿಗಳನ್ನು ಕುವೆಂಪುರ ಕಾನೂರು ಸುಬ್ಬಮ್ಮ ಹೆಗ್ಗಡತಿ ಮತ್ತು ಯು ಆರ್ ಅನಂತಮೂರ್ತಿಯವರ ಸಂಸ್ಕಾರ ಸಿನಿಮಾ ಮಾಡಿದ ಏಕೈಕ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರೆಂಬ ಗೌರವಕ್ಕೆ ಕಾರ್ನಾಡ್ ಪಾತ್ರರಾಗಿದ್ದಾರೆ.
  • ಕಾರ್ನಾಡ್ ಅವರಿಗೆ ಪ್ರಶಸ್ತಿ ಬಂದಾಗ ಸೌಜನ್ಯದಿಂದಲೇ ಮರಾಠಿಯ ವಿಜಯತೆಂಡೂಲ್ಕರ್ ಅವರಂಥವರಿಗೆ ಈ ಪ್ರಶಸ್ತಿ ಬರಬೇಕಿತ್ತು ಎಂದು ಹೇಳಿ ದೊಡ್ಡತನ ಮೆರೆದಿದ್ದರು.
  • "ಕಾರ್ನಾಡರು ವಸ್ತುವನ್ನು ಗ್ರಹಿಸುವ ಕ್ರಮದಲ್ಲೇ ಅವರ ಅನನ್ಯತೆ ಇದೆ. ಈ ಗ್ರಹಿಕೆಗೆ ಪೂರಕವಾದ ರಚನಾಕ್ರಮವನ್ನು ಅವರು ಕಂಡುಕೊಂಡಿದ್ದಾರೆ. ಒಂದು ಸಮಸ್ಯೆಯನ್ನು ನಾಟಕ ರೂಪಕ್ಕೆ ಒಗ್ಗಿಸಿಕೊಂಡು ಅದಕ್ಕೊಂದು structure ಕೊಟ್ಟು ಜನರ ಮುಂದಿಡುವುದರಲ್ಲೇ ನಾಟಕಕಾರನ ಸೋಲು ಗೆಲುವು ಎರಡೂ ಅಡಗಿದೆ." ಎಂದು ಕಾರ್ನಾಡರ ನಾಟಕಗಳ ವಸ್ತು, ಗ್ರಹಿಕೆ ಬಗ್ಗೆ ಭಾರತೀಯ ರಂಗಭೂಮಿಯ ಹಿರಿಯ ನಿರ್ದೇಶಕ ಬಿ. ವಿ. ಕಾರಂತರು ದಾಖಲಿಸುತ್ತಾರೆ.
                                     

5. ಅಭಿನಯಿಸಿದ ತೆಲುಗು ಚಿತ್ರಗಳು

  • ರಕ್ಷಕುಡುte:రక్షకుడు
  • ಕೊಂಡೂರ - ೧೯೭೮
  • ಪುಲಿ - ೨೦೧೦
  • ಪ್ರೇಮಿಕುಡುte:ప్రేమికుడు
  • ಧರ್ಮ ಚಕ್ರಂte:ధర్మచక్రం -೧೯೯೬
  • ಗುಣ - ೧೯೯೧
  • ಶಂಕರ್ ದಾದಾ ಎಂ.ಬಿ.ಬಿ.ಎಸ್en:శంకర్ దాదా ఎం.బి.బి.ఎస్. -೨೦೦೪
  • ಆನಂದಭೈರವಿte:ఆనంద భైరవి
  • ಚೈತನ್ಯ -೧೯೯೧
                                     

6. ಪ್ರಶಸ್ತಿ, ಸನ್ಮಾನಗಳು

  • ಇಂಗ್ಲೆಂಡ್‌ನಲ್ಲಿ ನೆಹರು ಸೆಂಟರ್‌ನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.
  • ಸಿನಿಮಾ ಸೇವೆ ಪರಿಗಣಿಸಿ ಗೌರವ ಡಾಕ್ಟರೇಟ್
  • ಗುಬ್ಬಿ ವೀರಣ್ಣ ಪ್ರಶಸ್ತಿ,
  • ಜ್ಞಾನಪೀಠ -೧೯೯೮
  • ಕಾಳಿದಾಸ ಸಮ್ಮಾನ್ - ೧೯೯೮
  • ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ,
  • ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ,
  • ಪುಟ್ಟಣ್ಣ ಕಣಗಾಲ್ ಪ್ರಶಸ್ತಿ: ೨೦೦೮ -೦೯ ರ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಮಂಡಳಿ ಘೋಷಿಸಿದ್ದ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಪ್ರಶಸ್ತಿಯನ್ನು ಗಿರೀಶ್ ಕಾರ್ನಾಡ್ ನಿರಾಕರಿಸಿದ್ದಾರೆ. ಜೀವಮಾನದ ಸಾಧನೆಗಾಗಿ ಕೆ.ಎಸ್.ಆರ್.ದಾಸ್ ಅವರಿಗೆ ನೀಡಲಾಗಿದ್ದ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಕೆಲ ಕ್ಷಣಗಳಲ್ಲಿಯೇ ಹಿಂದಕ್ಕೆ ಪಡೆದು ಅದನ್ನು ಗಿರೀಶ್ ಕಾರ್ನಾಡ್ ಅವರಿಗೆ ನೀಡಲಾಗಿತ್ತು.ದಾಸ್ ಅವರಿಗೆ ಪ್ರಶಸ್ತಿ ನೀಡಿದ್ದನ್ನು ಘೋಷಿಸಿದ ಕೂಡಲೆ "ಕೆ.ಎಸ್.ಆರ್.ದಾಸ್" ಅವರು ಕನ್ನಡ ಚಿತ್ರರಂಗಕ್ಕೆ ಹೆಚ್ಚಿನ ಸೇವೆ ಸಲ್ಲಿಸಿಲ್ಲವೆಂಬುದು ಪತ್ರಕರ್ತರಿಂದ ಪ್ರತಿಭಟನೆ ವ್ಯಕ್ತವಾಗಿದ್ದರಿಂದ ಅದನ್ನು ಕೂಡಲೆ ಹಿಂದೆ ಪಡೆದು ಅದನ್ನು ಕಾರ್ನಾಡ್ ಅವರಿಗೆ ಭಾರ್ಗವ ನೀಡಿದ್ದರು.
  • ಪದ್ಮಭೂಷಣ -೧೯೯೨
  • ಡಾ.ಟಿ.ಎಂ.ಎ.ಪೈ ವಿಶಿಷ್ಟ ಕೊಂಕಣಿ ಸಾಧಕ ಪ್ರಶಸ್ತಿ 1996
  • ಕಾರ್ನಾಡ್ ಕೇಂದ್ರ ಸಂಗೀತ-ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ೧೯೮೮-೯೩ ಕಾರ್ಯನಿರ್ವಹಿಸಿದ್ದಾರೆ.
  • ಟಾಟಾ ಲಿಟರೇಚರ್ ಲೈವ ಜೀವಮಾನ ಸಾಧನೆ ಚಿತ್ರೋದ್ಯಮ-2017
  • ಪದ್ಮಶ್ರೀ -೧೯೭೪
Free and no ads
no need to download or install

Pino - logical board game which is based on tactics and strategy. In general this is a remix of chess, checkers and corners. The game develops imagination, concentration, teaches how to solve tasks, plan their own actions and of course to think logically. It does not matter how much pieces you have, the main thing is how they are placement!

online intellectual game →