Топ-100
Back

ⓘ ಎಂ.ಆರ್.ವಿಠಲ್. ಕನ್ನಡ ಚಿತ್ರರಂಗದ ನಿರ್ದೇಶಕರಲ್ಲಿ ಪ್ರಮುಖ ಹೆಸರಾದ ಮೈಸೂರು ರಾಘವೇಂದ್ರರಾವ್ ವಿಠಲ್೧೯೦೮ ಜುಲೈ ೧೯ರಂದು ಜನಿಸಿದರು. ಮೈಸೂರು ಮತ್ತು ಮದ್ರಾಸುಗಳಲ್ಲಿ ವ್ಯಾಸಂಗ ನಡೆಸಿದರು. ಆಟೋಮ ..                                     

ⓘ ಎಂ.ಆರ್.ವಿಠಲ್

ಕನ್ನಡ ಚಿತ್ರರಂಗದ ನಿರ್ದೇಶಕರಲ್ಲಿ ಪ್ರಮುಖ ಹೆಸರಾದ ಮೈಸೂರು ರಾಘವೇಂದ್ರರಾವ್ ವಿಠಲ್೧೯೦೮ ಜುಲೈ ೧೯ರಂದು ಜನಿಸಿದರು. ಮೈಸೂರು ಮತ್ತು ಮದ್ರಾಸುಗಳಲ್ಲಿ ವ್ಯಾಸಂಗ ನಡೆಸಿದರು. ಆಟೋಮೊಬೈಲ್ ಮತ್ತು ಇಂಜಿನಿಯರಿಂಗ್ ಪದವೀಧರರಾದ ವಿಠಲ್ ಆ ಕ್ಷೇತ್ರದಲ್ಲಿ ಪ್ರಾಧ್ಯಾಪಕರಾಗಿಯೂ ಹೆಸರು ಮಾಡಿದರು. ೧೯೨೮ರಲ್ಲಿ ಕೊಲ್ಲಾಪುರದಲ್ಲಿ ಸ್ವಂತ ಕಾಲೇಜನ್ನು ಆರಂಭಿಸಿದರು. ಈ ಸಂದರ್ಭದಲ್ಲಿ ಅವರಿಗೆ ಧ್ವನಿಗ್ರಹಣದ ಬಗ್ಗೆ ಆಸಕ್ತಿ ಬೆಳೆಯಿತು.

                                     

1. ಚಿತ್ರರಂಗದಲ್ಲಿ

ಭಾರತೀಯ ಚಿತ್ರರಂಗದ ಪಿತಾಮಹ ದಾದಾ ಸಾಹೇಬ್ ಫಾಲ್ಕೆ ಅವರ ಬಳಿ ಚಲನಚಿತ್ರ ಕಲೆಯನ್ನು ಕಲಿತ ಅವರು ಲಾಹೋರಿಗೆ ತೆರಳಿ ಶಬ್ದ ಗ್ರಹಣವನ್ನು ವಿಶೇಷವಾಗಿ ಅಧ್ಯಯನ ಮಾಡಿದರು. ೧೯೩೮ ರಲ್ಲಿ ಆಗ್ ಎಂಬ ಹಿಂದಿ ಚಿತ್ರವನ್ನು ನಿರ್ದೇಶಿಸಿದರು. ಹಲವಾರು ತಮಿಳು ಮತ್ತು ಮಲೆಯಾಳಂ ಚಿತ್ರಗಳನ್ನು ನಿರ್ದೇಶಿಸಿದರು. ೧೯೫೨ ರಲ್ಲಿ ಬರ್ನಿಂಗ್ ಸಿಟಿ ಎಂಬ ಫ್ರೆಂಚ್ ಭಾಷೆಯ ಚಿತ್ರವನ್ನು ನಿರ್ದೇಶಿಸಿದರು. ವಿಠಲ್ ಕನ್ನಡ ಚಿತ್ರ್ರರಂಗಕ್ಕೆ ಬಂದಿದ್ದು ತಡವಾಗಿ. ಆದರೆ ಕನ್ನಡದಲ್ಲಿ ಅನೇಕ ಹೊಸ ಅಲೆಯ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ೧೯೬೩ರಲ್ಲಿ ವಾದಿರಾಜ್ ಮತ್ತು ಜವಾಹರ್ ನಿರ್ಮಾಣದ ನಂದಾದೀಪ ಚಿತ್ರದ ಮೂಲಕ ಕನ್ನಡ ಚಿತ್ರರಂಗವನ್ನು ಪ್ರವೇಶಿಸಿದರು. ನಕ್ಕರೆ ಅದೇ ಸ್ವರ್ಗ ಚಿತ್ರದ ಮೂಲಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರನ್ನೂ, ಯಾರ ಸಾಕ್ಷಿ? ಚಿತ್ರದ ಮೂಲಕ ನಟಿ ಮಂಜುಳ ಅವರನ್ನು ಬೆಳ್ಳಿತೆರೆಗೆ ಪರಿಚಯಿಸಿದ ಹೆಗ್ಗಳಿಕೆ ವಿಠಲ್ ಅವರದು. ‘ನಂದಾದೀಪ’, ‘ಮಿಸ್ ಲೀಲಾವತಿ’, ‘ಹಣ್ಣೆಲೆ ಚಿಗುರಿದಾಗ’, ‘ಪ್ರೊಫೆಸರ್ ಹುಚ್ಚುರಾಯ’, ‘ನಕ್ಕರೆ ಅದೇ ಸ್ವರ್ಗ’, ‘ಯಾರ ಸಾಕ್ಷಿ’, ‘ಕೂಡಿ ಬಾಳೋಣ’, ‘ಮಂಗಳ ಮಹೂರ್ತ’, ‘ಪ್ರೇಮಮಯಿ’, ‘ಮನಸ್ಸಿದ್ದರೆ ಮಾರ್ಗ’, ‘ಮಾರ್ಗದರ್ಶಿ’, ‘ವರದಕ್ಷಿಣೆ’, ‘ಕಣ್ಣಾಮುಚ್ಚಾಲೆ’, ‘ಎರಡುಮುಖ’ ಮುಂತಾದವು ವಿಠಲ್ ಅವರ ಪ್ರಮುಖ ಕನ್ನಡ ಚಿತ್ರಗಳು.

                                     

2. ಚಿತ್ರರಂಗದ ವ್ಯಾಖರಣ

ಚಲನಚಿತ್ರಗಳಿಗೆ ತನ್ನದೇ ಆದ ವ್ಯಾಕರಣವಿದೆ ಎಂದು ಪ್ರತಿಪಾದಿಸಿದ ಚಿಂತಕರಲ್ಲಿ ವಿಠಲ್ ಪ್ರಮುಖರು. ಪಾಶ್ಚಾತ್ಯ ಸಿನಿಮಾ ತಂತ್ರಜ್ಞಾನವನ್ನು ತಲಸ್ಪರ್ಶಿಯಾಗಿ ಅರಿತಿದ್ದ ವಿಠಲ್, ಭಾರತೀಯ ಪರಂಪರೆಯ ನೆಲೆಗಳನ್ನು ಬಲ್ಲವರಾಗಿದ್ದರು. ಹೀಗಾಗಿ ಅವರು ತಮ್ಮ ಚಿತ್ರಗಳಲ್ಲಿ ಚಿತ್ರಗೀತೆಗೆ ಮಾತ್ರವಲ್ಲ, ಸಂಗೀತ ಎಂಬ ಪರಿಕರಕ್ಕೇ ವಿಶೇಷ ಅರ್ಥ ಕೊಟ್ಟರು. ಹಿನ್ನೆಲೆ ಸಂಗೀತವನ್ನು ಅವರು ಬಳಸಿದ ಕ್ರಮ ವಿಶೇಷ ಅಧ್ಯಯನಕ್ಕೆ ಅರ್ಹವಾಗಿದೆ. ಹಾಗೇ ಕ್ಯಾಮರಾ ಮತ್ತು ಎಡಿಟಿಂಗ್ ಗಳಲ್ಲಿ ತಮಗಿದ್ದ ಪರಿಣತಿಯಿಂದ ಅವರು ಹತ್ತಾರು ಪ್ರಯೋಗಗಳಿಗೆ ಮುಂದಾದರು. 1986 ರಲ್ಲಿ ಹೈದರಾಬಾದಿನಲ್ಲಿ ನಡೆದ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪಾಲ್ಗೊಂಡು ಭಾರತೀಯ ಚಿತ್ರಗಳನ್ನು ವೀಕ್ಷಿಸಿ ಆತಂಕಗೊಂಡ ವಿಠಲ್ ಅವರು ಅಂದಿನ ಪ್ರಧಾನಿ ರಾಜೀವ್ ಗಾಂಧಿಯವರಿಗೆ ಬರೆದಿದ್ದ ಪತ್ರದಲ್ಲಿ ಹೇಳಿದ್ದ ಮಾತುಗಳಿವು:" ಇಂದಿನ ಚಿತ್ರಗಳು ಭಾರತೀಯತೆ ಎಂಬುದನ್ನು ಭಾವುಕ ನೆಲೆಯಲ್ಲಿ ಮಾತ್ರ ನೋಡುತ್ತಿವೆ. ಅದಕ್ಕಿರುವ ಸಾಸ್ಕೃತಿಕ ಸೂಕ್ಷ್ಮಗಳು ಮರೆಯಾಗುತ್ತಿವೆ. ತಾಂತ್ರಿಕತೆಯ ಅಬ್ಬರ ಹೆಚ್ಚಿದಂತೆ ಚಲನಚಿತ್ರ ಕಸುಬುಗಾರಿಕೆ ಎಂಬುದೇ ಒಂದು ಕಾರ್ಖಾನೆಯಂತಾಗಬಹುದು. ತಾಂತ್ರಿಕತೆ ಚಿತ್ರ ವ್ಯಾಕರಣದೊಳಗೆ ಸೇರುತ್ತಿಲ್ಲ. ಹಾಗಾಗದಿದ್ದರೆ ಆ ಬೆಳವಣಿಗೆಗೆ ಮಾಧ್ಯಮದ ದೃಷ್ಟಿಯಿಂದ ಯಾವ ಅರ್ಥವೂ ಇಲ್ಲ”. ವಿಠಲ್ ಅವರು ಈ ಪ್ರಶ್ನೆ ಎತ್ತಿ ಮೂರು ದಶಕಗಳೇ ಕಳೆದುಹೋಗಿದೆ. ಅವರ ಆತಂಕಗಳೆಲ್ಲಾ ನಿಜವಾಗಿದೆ. ಇವತ್ತು ಕನ್ನಡ ಚಿತ್ರಗಳಲ್ಲಿ ಭಾಷೆಯ ದೃಷ್ಟಿಯಲ್ಲೂ ಕನ್ನಡ ಉಳಿದಿಲ್ಲ. ಭಾರತೀಯ ಚಿತ್ರರಂಗ ತಾಂತ್ರಿಕ ಚಮತ್ಕಾರಗಳಲ್ಲಿ ಮುಳುಗಿಹೋಗಿದೆ.

                                     

3. ಎಂ.ಆರ್.ವಿಠಲ್ ನಿರ್ದೇಶನದ ಕನ್ನಡ ಚಿತ್ರಗಳು

 • ಪ್ರೇಮಮಯಿ
 • ಮಿಸ್ ಲೀಲಾವತಿ
 • ವರದಕ್ಷಿಣೆ
 • ನಕ್ಕರೆ ಅದೇ ಸ್ವರ್ಗ
 • ಕಣ್ಣುಮುಚ್ಚಾಲೆ
 • ಮಾರ್ಗದರ್ಶಿ
 • ಯಾರ ಸಾಕ್ಷಿ?
 • ನಂದಾದೀಪ
 • ಮಂಗಳ ಮುಹೂರ್ತ
 • ಕೂಡಿ ಬಾಳೋಣ
 • ಹಣ್ಣೆಲೆ ಚಿಗುರಿದಾಗ
 • ಮನಸ್ಸಿದ್ದರೆ ಮಾರ್ಗ
 • ಪ್ರೊಫೆಸರ್ ಹುಚ್ಚುರಾಯ
                                               

ಪುಟ್ಟಣ್ಣ ಕಣಗಾಲ್ ಪ್ರಶಸ್ತಿ

ಕನ್ನಡ ಸಿನೆಮಾದ ಯಶಸ್ವಿ ಚಲನಚಿತ್ರ ನಿರ್ದೇಶಕರಲ್ಲಿ ಕಣಗಾಲ್ ಒಬ್ಬರಾಗಿದ್ದರು. ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರತಿ ವರ್ಷ ನಿರ್ದೇಶಕರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

Free and no ads
no need to download or install

Pino - logical board game which is based on tactics and strategy. In general this is a remix of chess, checkers and corners. The game develops imagination, concentration, teaches how to solve tasks, plan their own actions and of course to think logically. It does not matter how much pieces you have, the main thing is how they are placement!

online intellectual game →