Топ-100
Back

ⓘ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದ ..                                               

ಎಸ್.ಕೃಷ್ಣಸ್ವರ್ಣಸಂದ್ರ

ಎಸ್.ಕೃಷ್ಣಸ್ವರ್ಣಸಂದ್ರ ಮಂಡ್ಯ ಜಿಲ್ಲೆಯ ಖ್ಯಾತ ಸಾಹಿತಿ ಜೊತೆಗೆ ಜಿಲ್ಲೆಯ ಹಿರಿಯ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ೨೧, ನವೆಂಬರ್ ೧೯೬೮ರಂದು ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿ ಕೆಂಪೇಗೌಡ ಸಿದ್ಧಲಿಂಗಯ್ಯ-ಕೆಂಪಮ್ಮ ದಂಪತಿಗಳ ಪುತ್ರರಾಗಿ ಜನಿಸಿದ ಇವರು, ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರಕಾರಿ ಪ್ರಾಥಮಿಕ ಶಾಲೆ ಗುತ್ತಲಿನಲ್ಲಿ ಆರಂಭಿಸಿ, ಪ್ರೌಢ ವಿದ್ಯಾಭ್ಯಾಸ ವನ್ನು ಮಂಡ್ಯದ ಮೈಷುಗರ್ ಶಾಲೆಯಲ್ಲಿ ಪೂರ್ಣಗೊಳಿಸಿದರು. ಪಿ.ಇ.ಎಸ್. ಕಾಲೇಜಿನಲ್ಲಿ ಪದವಿ ವಿದ್ಯಾಭ್ಯಾಸ ಮುಗಿಸಿ, ಉನ್ನತ ಶಿಕ್ಷಣ ವನ್ನು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಮಾನಸ ಗಂಗೋತ್ರಿ ಮೈಸೂರಿನಲ್ಲಿ ಮುಗಿಸಿದರು. ಜಾನಪದ ಎಂ.ಎಯಲ್ಲಿ ಹೆಚ್ಚು ಅಂಕ ಗಳಿಸಿದ್ದಕ್ಕೆ ಸರ್ಕಾರದಿಂದ ನಗದು ಬಹುಮಾನ ಪಡೆದರು.

                                               

ಪ್ರಕಾಶ ಖಾಡೆ

ಓದಿದ್ದು ತೊದಲಬಾಗಿ, ಕೆರೂರ ಬದಾಮಿ, ಇಳಕಲ್ಲ ಹಾಗೂ ಧಾರವಾಡಗಳಲ್ಲಿ, ಕನ್ನಡದಲ್ಲಿ ಎಂ.ಎ.ಪ್ರಥಮ ದರ್ಜೆಯಲ್ಲಿ ಪಾಸಾಗಿ 2005ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ "ನವೋದಯ ಕಾವ್ಯದ ಮೇಲೆ ಜಾನಪದದ ಪ್ರಭಾವ" ಮಹಾ ಪ್ರಬಂಧಕ್ಕೆ ಪಿಎಚ್.ಡಿ. ಪದವಿ ಪಡೆದರು.

                                               

ಪ್ರದೀಪ ಕುಮಾರ ಹೆಬ್ರಿ

ಡಾ ಪ್ರದೀಪ ಕುಮಾರ ಹೆಬ್ರಿಯವರು ೦೧-೦೬-೧೯೫೮ರಲ್ಲಿ ಕಾರ್ಕಳ ತಾಲ್ಲೂಕಿನ ಹೆಬ್ರಿಯಲ್ಲಿ ಜನಿಸಿದರು. ವಿದ್ಯಾಭ್ಯಾಸದ ನಂತರ ಮಂಡ್ಯದಲ್ಲಿ ಕಳೆದ ಮೂವತ್ತು ವರ್ಷಗಳಿಂದ ನೆಲೆಸಿದ್ದಾರೆ. ಮಂಡ್ಯದಲ್ಲಿ ತಮ್ಮ "ದರ್ಶಿನಿ ಕ್ಲಿನಿಕಲ್ ಲ್ಯಾಬೋರೇಟರಿ" ಎಂಬ ತಮ್ಮ ವೈದ್ಯಕೀಯ ಪ್ರಯೋಗ ಶಾಲೆಯನ್ನು ನಡೆಸುತ್ತಿದ್ದಾರೆ. ಬಾಲ್ಯದಿಂದಲೂ ಸಂಗೀತ, ನೃತ್ಯ, ತಬಲ, ನಾಟಕ, ಯಕ್ಷಗಾನ, ಸಾಹಿತ್ಯ. ಹೀಗೆ ಹಲವಾರು ಕ್ಷೇತ್ರಗಳಲ್ಲಿ ಆಸಕ್ತಿ ತೋರುತ್ತಿದ್ದಾರೆ. ೧೯೮೯ರಲ್ಲಿ ಇವರ ಮೊದಲ ಕೃತಿ "ಈ ಬಾಳ ಪಯಣ" ಪ್ರಕಟವಾಯಿತು. ಅಲ್ಲಿಂದ ಈ ತನಕ ೧೬೦ ಕೃತಿಗಳು ಪ್ರಕಟವಾಗಿವೆ. ನಾಲ್ಕು ಸಿ ಡಿ ಗಳೂ ಹೊರಬಂದಿವೆ. ಮಂಡ್ಯದಲ್ಲಿ ಅನೇಕ ಸಾಹಿತ್ಯಿಕ, ಸಾಮಾಜಿಕ ಸಂಘಟನೆಗಳ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ನಾಡಿನ ಹಲವಾರು ಸಂಘ ...

                                               

ಕೃಷ್ಣ ಕೊಲ್ಹಾರ ಕುಲಕರ್ಣಿ

ಕೊಲ್ಹಾರ, ವಿಜಾಪುರಗಳಲ್ಲಿ ಎಸ್‌.ಎಸ್‌.ಎಲ್‌.ಸಿ ಯ ನಂತರ, ತಂದೆಯ ಸಾವಿನಿಂದ ವಿದ್ಯೆಗೆ ವಿದಾಯ ಹೇಳಿ ಸೇರಿದ್ದು, ಅಂಚೆ ಮತ್ತು ತಂತಿ ಇಲಾಖೆ. ಮುಂಬಯಿ, ರಾಯಚೂರು, ಬೆಳಗಾವಿ, ಮೈಸೂರು, ವಿಜಾಪುರ, ಹಾಸನ ಮುಂತಾದೆಡೆಗಳಲ್ಲಿ ಸೇವೆ ಸಲ್ಲಿಸಿ ೧೯೯೨ ರಲ್ಲಿ ಸ್ವ-ಇಚ್ಛೆಯಿಂದ ನಿವೃತ್ತಿ.ಪಡೆದರು ಮೈಸೂರಿನಲ್ಲಿದ್ದಾಗ ಮುಕ್ತವಿಶ್ವವಿದ್ಯಾಲಯದಿಂದ ಆಕರ್ಷಿತರಾಗಿ ಕನ್ನಡ ಸಾಹಿತ್ಯ ಮತ್ತು ಕರ್ನಾಟಕ ಸಂಸ್ಕೃತಿಯ ಚರಿತ್ರೆಯಲ್ಲಿ ಪಡೆದ ಎಂ.ಎ. ಪದವಿ. ಗುಲಬರ್ಗಾ ವಿಶ್ವವಿದ್ಯಾಲಯದಿಂದ ಡಾ.ಕೃಷ್ಣಮೂರ್ತಿ ಕಿತ್ತೂರರ ಮಾರ್ಗದರ್ಶನದಲ್ಲಿ ‘ಕಾಖಂಡಕಿ ಶ್ರೀಮಹಿಪತಿದಾಸರು’ ಪ್ರೌಢ ಪ್ರಬಂಧ ಮಂಡಿಸಿ ಪಡೆದ ಪಿಎಚ್‌.ಡಿ. ಪದವಿ. ಹೊಸದಿಲ್ಲಿಯ ಭಾರತೀಯ ಇತಿಹಾಸ ಅನುಸಂಧಾನದ ಹಿರಿಯ ಶಿಷ್ಯವೇತನದಲ್ಲಿ ಅದಿಲ್‌ಶಾಹಿ ಕಾಲದ ಹಿಂದು-ಮುಸ್ಲಿಂ ಸಂಬಂಧ ಕುರಿತು ಮಾಡಿದ ಸ ...

                                               

ಜಮಖಂಡಿ ತಾಲ್ಲೂಕು

ಜಮಖಂಡಿ - ಬಾಗಲಕೋಟೆ ಜಿಲ್ಲೆಯ ಒಂದು ಪ್ರಮುಖ ತಾಲ್ಲೂಕು ಕೇಂದ್ರ. ಈ ಪಟ್ಟಣ್ಣಕ್ಕೆ ಜಮಖಂಡಿ ಎಂಬ ಹೆಸರು ಬರುವುದಕ್ಕೆ ಐತಿಹಾಸಿಕ ಕಾರಣಗಳಿವೆ. ಇಲ್ಲಿರುವ ಪ್ರಾಚೀನ ದೇವಾಲಯ ಜಂಬುಕೇಶ್ವರ ಗುಡಿಗೂ ಈ ಪಟ್ಟಣದ ಹೆಸರಿಗೂ ನಂಟಿದೆ. ಈ ಗುಡಿ ಚಾಲುಕ್ಯರ ಕಾಲಕ್ಕೆ ಸೇರಿದ್ದು. ೧೯೩೭ ರಲ್ಲಿ ಜಮಖಂಡಿಯಲ್ಲಿ ೨೨ ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಿತ್ತು.

                                               

ಬಸವರಾಜ ಪುರಾಣಿಕ

ಬಸವರಾಜ ಪುರಾಣಿಕ ಓರ್ವ ಲೇಖಕ, ಭಾಷಾಂತರಕಾರ, ಪ್ರೊಫೈಲ್ ಬರಹಗಾರ ಮತ್ತು ವಚನ ಸಾಹಿತ್ಯಕ್ಕೆ ಸಮರ್ಪಿತವಾದ ಪ್ರಸಿದ್ಧ ಭಾಷಣಕಾರರಾಗಿದ್ದರು. ಅವರು ಶಿವ ಶರಣರ ತತ್ತ್ವಶಾಸ್ತ್ರದಲ್ಲಿ ಪರಿಣತರಾಗಿದ್ದರು ಮತ್ತು ಅಲ್ಲಮ ಪ್ರಭು ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದರು. ಅವರು ಉರ್ದುದಿಂದ ಕನ್ನಡಕ್ಕೆ ಪುಸ್ತಕಗಳನ್ನು ಅನುವಾಡಿಸಿದ ಪ್ರಸಿದ್ಧ ಭಾಷಾಂತರಕಾರರಾಗಿದ್ದರು. ಅವರಿಗೆ ಕರ್ನಾಟಕ ಅನುವಾದ ಅಕಾಡೆಮಿ 2007 ರಲ್ಲಿ ಅನುವಾದಕ್ಕೆ ನೀಡಿದ ಕೊಡುಗೆಗಾಗಿ ಪ್ರಶಸ್ತಿ ನೀಡಲಾಗಿತು ಮತ್ತು ಬಿಜಾಪುರ ಸಾಹಿತ್ಯ ಸಮ್ಮೇಳನ 2013 ರಲ್ಲಿ ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ಅವರನ್ನು ಸನ್ಮಾನಿಸಲಾಯಿತು. ಅವರ ಪುಸ್ತಕ ಅನುಪಮ ಚರಿತ ಅಲಮಪ್ರಭುದೇವ ಗೆ ಕಾರ್ನಾಟಕ ವಿಶ್ವವಿದ್ಯಾನಿಲಯದಿಂದ ಪ್ರೊಫೆಸರ್ ಮಾಳವಾಡ ಪ್ರಶಸ್ತಿಯನ್ನು ನೀಡಲಾಯಿತು. ಅವರು ಕರ್ನಾ ...

ಕನ್ನಡ ಸಾಹಿತ್ಯ ಸಮ್ಮೇಳನ
                                     

ⓘ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.

                                     

1. ಹಿನ್ನಲೆ

೧೯೧೪ರ ದಿ ಮೈಸೂರು ಎಕಾನಾಮಿಕ್ ಕಾನ್ಫೆರೆನ್ಸ್ ಮೈಸೂರು ಸಂಪದಭ್ಯುದಯ ಸಮಾಜ ಸಮ್ಮೆಳನದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗೆ ಪೂರಕವಾದ ಪರಿಷತ್ತನ್ನು ಸ್ಥಾಪಿಸುವ ವಿಚಾರದಲ್ಲಿ ರಾವ್ ಬಹದ್ದೂರ್ ಎಂ. ಶಾಮರಾವ್, ಕರ್ಪೂರ ಶ್ರೀನಿವಾಸರಾವ್ ಮತ್ತು ಪಿ. ಎಸ್. ಅಚ್ಯುತರಾವ್ ಅವರುಗಳನ್ನೊಳಗೊಂಡ ಉಪಸಮಿತಿಯನ್ನು ರಚಿಸಲಾಯಿತು. ಈ ಉಪಸಮಿತಿಯು ಅಂದಿನ ವಿವಿಧ ಕನ್ನಡ ನಾಡುಗಳ ಪ್ರಾಜ್ಞರೊಡನೆ ಸಮಾಲೋಚಿಸಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿ, ಆ ಸಮ್ಮೇಳನಗಳಲ್ಲಿ ಕೆಲವು ಉದ್ದೇಶ ಸಾಧನಕ್ರಮಗಳನ್ನು ಚಿಂತಿಸುವ ಕುರಿತಾದ ಮಾರ್ಗದರ್ಶನ ಸೂತ್ರಗಳನ್ನು ರೂಪಿಸಿತು.

 • ಕನ್ನಡ ಮಾತನ್ನಾಡುವ ಪ್ರದೇಶಗಳಲ್ಲಿ ಸಾಧ್ಯವಾದಷ್ಟು ಸ್ಥಳಗಳಲ್ಲಿ ಕನ್ನಡದ ವಾಚನಾಲಯಗಳನ್ನೂ ಪುಸ್ತಕಭಂಡಾರಗಳನ್ನೂ ಸ್ಥಾಪಿಸುವುದು.
 • ಕನ್ನಡ ನಾಡುಗಳ ಪ್ರಮುಖರನ್ನು ಸೇರಿಸಿ ಸಭೆಗಳನ್ನೇರ್ಪಡಿಸುವುದು, ಮತ್ತು ಸಮರ್ಥರಾದ ವಿದ್ವಾಂಸರಿಂದ ಉಪನ್ಯಾಸಗಳನ್ನು ಮಾಡಿಸುವುದು.
 • ಗ್ರಂಥಕರ್ತರಿಗೆ ಬಿರುದು ಸಂಭಾವನೆ ಕೊಡುವುದು.
 • ನವೀನಶಾಸ್ತ್ರಗಳಿಗೆ ಸಂಬಂಧಪಟ್ಟ ಕನ್ನಡ ಗ್ರಂಥಗಳಲ್ಲಿ ಪ್ರಯೋಗಿಸಲು ಯೋಗ್ಯವಾದ ಪಾರಿಭಾಷಿಕ ಶಬ್ದಗಳ ಕೋಶವನ್ನು ಪ್ರಕಟಿಸುವುದು.
 • ಕರ್ನಾಟಕ ಭಾಷಾಸಂಸ್ಕರಣ, ಕರ್ಣಾಟಕ ಗ್ರಂಥಾಭಿವೃದ್ಧಿಗಳನ್ನು ಕುರಿತು ಪಂಡಿತಯೋಗ್ಯವಾದ ಲೇಖನಗಳನ್ನೊಳಕೊಂಡ ಕನ್ನಡದ ಪತ್ರಿಕೆಗಳನ್ನು ಪ್ರಕಟಿಸುವುದು.
 • ಕರ್ನಾಟಕ ಭಾಷೋನ್ನತಿಗೂ, ಗ್ರಂಥಾಭಿವೃದ್ಧಿಗೂ ಸಂಬಂಧಪಡುವ ಸಮಸ್ತ ವಿಷಯಗಳನ್ನೂ ಆಯಾ ಸರ್ಕಾರದವರ ಪರಾಮರ್ಶಕ್ಕೆ ತಂದು ಅವನ್ನು ತೃಪ್ತಿಕರವಾಗಿ ವ್ಯವಸ್ಥೆಮಾಡಿಸಿಕೊಳ್ಳುವುದಕ್ಕೆ ತಕ್ಕ ಏರ್ಪಾಡುಗಳನ್ನು ಮಾಡುವುದು.
 • ಉತ್ಕೃಷ್ಟವಾದ ಪ್ರಾಚೀನ ಗ್ರಂಥಗಳನ್ನೂ, ಕನ್ನಡ ದೇಶಗಳ ಚರಿತ್ರೆಯನ್ನೊಳಗೊಂಡ ಗ್ರಂಥಗಳನ್ನೂ ಸಂಗ್ರಹಿಸಿ, ಅದನ್ನು ಪರಿಷ್ಕರಿಸಿ ಪ್ರಕಟಿಸುವುದೂ ಅಲ್ಲದೆ, ಕನ್ನಡನಾಡಿನ ಪೂರ್ವಸ್ಥಿತಿಯನ್ನು ವಿಶದಗೊಳಿಸುವ ವಸ್ತುಗಳನ್ನು ಕೂಡಿಟ್ಟು ಅವುಗಳನ್ನು ಕಾಪಾಡುವುದಕ್ಕಾಗಿ ಪ್ರಾಚೀನ ವಸ್ತುಸಂಗ್ರಹಾಲಯವನ್ನೇರ್ಪಡಿಸುವುದು.
 • ಬೆರೆ ಭಾಷೆಗಳಲ್ಲಿರುವ ಉತ್ತಮ ಗ್ರಂಥಗಳನ್ನು ಕನ್ನಡಿಸಿ ಪ್ರಕಟಿಸುವುದು.
 • ಕನ್ನಡ ಭಾಷೆಗೂ ಕನ್ನಡ ಗ್ರಂಥಗಳಿಗೂ ಸಂಬಂಧಪಟ್ಟ ಎಲ್ಲಾ ಚರ್ಚಾಂಶಗಳನ್ನೂ ವಿಚಾರಮಾಡಿ ನಿರ್ಣಯಿಸುವುದು.
 • ತತ್ವಶಾಸ್ತ್ರ, ಪ್ರಕೃತಿವಿಜ್ಞಾನ, ಚರಿತ್ರೆ, ಸಾಹಿತ್ಯ ಮೊದಲಾದ ವಿಷಯಗಳಿಗೆ ಸಂಬಂಧಪಡುವ ಗ್ರಂಥಗಳನ್ನು ಕನ್ನಡದಲ್ಲಿ ಬರೆಯುವುದಕ್ಕೆ ಪ್ರೋತ್ಸಾಹಕೊಟ್ಟು ಅವುಗಳನ್ನು ಪ್ರಚುರಪಡಿಸುವುದು.
 • ಕರ್ನಾಟಕ ಭಾಷೆಗೂ ಸಾಹಿತ್ಯಕ್ಕೂ ಸಂಬಂಧಿಸಿದ ಅಪೂರ್ವ ಪರಿಶೋಧನ ಕಾರ್ಯದಲ್ಲಿ ನಿರತರಾಗಿರುವ ಕನ್ನಡ ಅಥವಾ ಸಂಸ್ಕೃತ ವಿದ್ವಾಂಸರಿಗೆ ಪಂಡಿತವೇತನಗಳನ್ನು ಕೊಡುವುದು.
 • ಕನ್ನಡ ಭಾಷೆಯಲ್ಲಿ ವ್ಯಾಕರಣ, ಚರಿತ್ರೆ, ನಿಘಂಟು ಬರೆಯಿಸುವುದು,
Free and no ads
no need to download or install

Pino - logical board game which is based on tactics and strategy. In general this is a remix of chess, checkers and corners. The game develops imagination, concentration, teaches how to solve tasks, plan their own actions and of course to think logically. It does not matter how much pieces you have, the main thing is how they are placement!

online intellectual game →