Топ-100
Back

ⓘ ಇಂಡಿ ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ಇಂಡಿ ಮತಕ್ಷೇತ್ರದಲ್ಲಿ 1.18.626 ಪುರುಷರು, 1.09.818 ಮಹಿಳೆಯರು ಸೇರಿ ಒಟ್ಟು 2. ..                                               

ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರ

ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ನಾಗಠಾಣ ಮತಕ್ಷೇತ್ರದಲ್ಲಿ 1.07.407 ಪುರುಷರು, 99.773 ಮಹಿಳೆಯರು ಸೇರಿ ಒಟ್ಟು 2.07.180 ಮತದಾರರಿದ್ದಾರೆ.

                                               

ಇಂಡಿ ತಾಲ್ಲೂಕು

ಇಂಡಿ ನಗರ ಹಾಗೂ ತಾಲ್ಲೂಕು ಕೇಂದ್ರ. ಇದು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯಲ್ಲಿದೆ. ಇಂಡಿ ಪಟ್ಟಣವು ರಾಜ್ಯ ಹೆದ್ದಾರಿ - 41 ರಲ್ಲಿದೆ. ಜಿಲ್ಲಾ ಕೇಂದ್ರ ವಿಜಯಪುರದಿಂದ ಸುಮಾರು 60 ಕಿ. ಮಿ. ದೂರ ಇದೆ.

                                               

ಸಿಂದಗಿ ವಿಧಾನಸಭಾ ಕ್ಷೇತ್ರ

ಸಿಂದಗಿ ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ಸಿಂದಗಿ ಮತಕ್ಷೇತ್ರದಲ್ಲಿ 1.15.455 ಪುರುಷರು, 1.07.576 ಮಹಿಳೆಯರು ಸೇರಿ ಒಟ್ಟು 2.23.160 ಮತದಾರರಿದ್ದಾರೆ.

                                               

ಅಂಜುಟಗಿ

ಚಳಿಗಾಲ ಮತ್ತು ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ. ಮಳೆಗಾಲ - ೧೮°C-೨೮°C ಡಿಗ್ರಿ ಸೆಲ್ಸಿಯಸ್. ಬೆಸಿಗೆ-ಚಳಿಗಾಲ ದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆಎಪ್ರೀಲನಲ್ಲಿ, ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ ಡಿಸೆಂಬರನಲ್ಲಿ ಉಷ್ಣತೆ ದಾಖಲಾಗಿದೆ. ಬೇಸಿಗೆಕಾಲ - ೩೫°C-೪೨°C ಡಿಗ್ರಿ ಸೆಲ್ಸಿಯಸ್ ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ ಜೂನ, ೧೯.೬ ಕಿಮಿ/ಗಂ ಜುಲೈಹಾಗೂ ೧೭.೫ ಕಿಮಿ/ಗಂ ಅಗಸ್ಟ್ ಇರುತ್ತದೆ.

                                               

ರೇವತಗಾಂವ

ಬೆಸಿಗೆ-ಚಳಿಗಾಲ ದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ 43 ಡಿಗ್ರಿವರೆಗೆಎಪ್ರೀಲನಲ್ಲಿ, ಅತೀ ಕಡಿಮೆ ಅಂದರೆ 9 ಡಿಗ್ರಿ ಸೆಲ್ಸಿಯಸವರೆಗೆ ಡಿಸೆಂಬರನಲ್ಲಿ ಉಷ್ಣತೆ ದಾಖಲಾಗಿದೆ. ಬೇಸಿಗೆಕಾಲ - 35°C-43°C ಡಿಗ್ರಿ ಸೆಲ್ಸಿಯಸ್ ಚಳಿಗಾಲ ಮತ್ತು ಮಳೆಗಾಲ - 18°C-30°C ಡಿಗ್ರಿ ಸೆಲ್ಸಿಯಸ್. ಮಳೆ - ಪ್ರತಿ ವರ್ಷ ಮಳೆ 300 - 600ಮಿಮಿ ಗಳಸ್ಟು ಆಗಿರುತ್ತದೆ. ಗಾಳಿ -ಗಾಳಿ ವೇಗ 18 ಕಿಮಿ/ಗಂ ಜೂನ, 19 ಕಿಮಿ/ಗಂ ಜುಲೈಹಾಗೂ 17 ಕಿಮಿ/ಗಂ ಅಗಸ್ಟ್ ಇರುತ್ತದೆ.

                                               

ಅಥರ್ಗಾ

ರೇವಣಸಿದ್ದಪ್ಪ ಮಾಸ್ತರರ ಪಲ್ಲಕ್ಕಿ ಬರುತ್ತೆ ಎಂದರೆ ಗ್ರಾಮದ ಚಿಕ್ಕವರು, ದೊಡ್ಡವರು ಎಂಬ ಬೇಧವಿಲ್ಲದೆ ಎಲ್ಲರೂ ರಸ್ತೆಯ ಮೇಲೆ ಅಡ್ಡಲಾಗಿ ಮಲಗುತ್ತಾರೆ. ರಸ್ತೆಗೆ ಅಡ್ಡಲಾಗಿ ಮಲಗಿದ ಜನರನ್ನು ದಾಟುತ್ತಾ ಪಲ್ಲಕ್ಕಿ ಮುಂದೆ ಸಾಗುತ್ತದೆ. ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ಅಥರ್ಗಾ ಗ್ರಾಮದ ಶಿಕ್ಷಕ ದಿ. ರೇವಣಸಿದ್ದಪ್ಪ ಮಾಸ್ತರರ ಬಗ್ಗೆ ಜನರಲ್ಲಿ ಎಷ್ಟು ಗೌರವ, ಭಕ್ತಿ ಇದೆ ಎನ್ನುವುದಕ್ಕೆ ಇದು ಸಾಕ್ಷಿ. ಗ್ರಾಮಸ್ಥರು ಶಿಕ್ಷಕನನ್ನು ದೇವರ ಸ್ಥಾನದಲ್ಲಿ ಕಂಡಿದ್ದು ನೋಡಿದರೆ, ಒಬ್ಬ ಶಿಕ್ಷಕ ಸರಿಯಾಗಿ ವೃತ್ತಿ ನಿರ್ವಹಿಸಿದರೆ ಜನತೆ ಅವರನ್ನು ಯಾವ ರೀತಿ ಕಾಣುತ್ತಾರೆ ಎಂಬುದಕ್ಕೆ ಇವರು ಒಂದು ನಿದರ್ಶನ. ಲೋಕಕ್ಕೆ ಶಿಕ್ಷಣದ ಬೆಳಕನ್ನು ಹರಡಿ, ಜನ ಮೆಚ್ಚುಗೆಗೆ ಪಾತ್ರನಾಗಿ, ಆದರ್ಶ ಶಿಕ್ಷಕನಾಗಿ ಬಾಳಿದ ರೇವಣಸಿದ್ದಪ್ಪ ಮಾಸ್ತರರ ನೆನಪಿಗಾಗಿ ...

                                               

ಡುಮಕನಾಳ

ಡುಮಕನಾಳ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನಲ್ಲಿದೆ. ಡುಮಕನಾಳ ಗ್ರಾಮವು ವಿಜಯಪುರ - ಸೋಲಾಪೂರ ರಾಷ್ತ್ರೀಯ ಹೆದ್ದಾರಿ - 13 ರ ಸಮೀಪದಲ್ಲಿ ಇದೆ. ಜಿಲ್ಲಾ ಕೇಂದ್ರ ವಿಜಯಪುರದಿಂದ ಸುಮಾರು 55 ಕಿ. ಮಿ. ಇದೆ.

                                               

ಆಲಮೇಲ

ಆಲಮೇಲ ಒಂದು ಪಟ್ಟಣ. ಜಿಲ್ಲಾ ಕೇಂದ್ರ ವಿಜಯಪುರದಿಂದ ಸುಮಾರು ೫೦ ಕಿ. ಮಿ. ಇದೆ. ಇದು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿದೆ. ಕರ್ನಾಟಕ ಸರ್ಕಾರವು ಮಾರ್ಚ 1, 2019 ರಂದು ವಾರ್ಷಿಕ ಮುಂಗಡ ಪತ್ರದ ಪ್ರಕಾರ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಆಲಮೇಲ ಪಟ್ಟಣವನ್ನು ಹೊಸ ತಾಲ್ಲೂಕೆಂದು ರಚಿಸಿದೆ.

                                               

ದೇವರ ಹಿಪ್ಪರಗಿ ತಾಲ್ಲೂಕು

ದೇವರ ಹಿಪ್ಪರಗಿ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯಲ್ಲಿದೆ. ದೇವರ ಹಿಪ್ಪರಗಿ ಗ್ರಾಮವು ವಿಜಯಪುರ - ಗುಲ್ಬರ್ಗಾ ಹೆದ್ದಾರಿಯಲ್ಲಿ ಇದೆ. ಜಿಲ್ಲಾ ಕೇಂದ್ರ ವಿಜಯಪುರದಿಂದ ಸುಮಾರು ೨೫ ಕಿ. ಮಿ. ಇದೆ. ಕರ್ನಾಟಕ ಸರ್ಕಾರವು ಫೆಬ್ರುವರಿ ೮, ೨೦೧೩ ರಂದು ವಾರ್ಷಿಕ ಮುಂಗಡ ಪತ್ರದ ಪ್ರಕಾರ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ದೇವರ ಹಿಪ್ಪರಗಿ ನಗರವನ್ನು ಹೊಸ ತಾಲ್ಲೂಕೆಂದು ರಚಿಸಿದೆ.

                                     

ⓘ ಇಂಡಿ ವಿಧಾನಸಭಾ ಕ್ಷೇತ್ರ

ಇಂಡಿ ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ಇಂಡಿ ಮತಕ್ಷೇತ್ರದಲ್ಲಿ 1.18.626 ಪುರುಷರು, 1.09.818 ಮಹಿಳೆಯರು ಸೇರಿ ಒಟ್ಟು 2.28.444 ಮತದಾರರಿದ್ದಾರೆ.

                                     

1. ಕ್ಷೇತ್ರದ ಇತಿಹಾಸ

ಪುಣ್ಯಕ್ಷೇತ್ರವಾಗಿಯೂ ಪ್ರಸಿದ್ಧಿ ಪಡೆದ ಇಂಡಿ ಕ್ಷೇತ್ರವು ವಿಜಯಪುರ ಜಿಲ್ಲೆಯ ಒಂದು ವಿಧಾನಸಭಾ ಕ್ಷೇತ್ರ. ಕರ್ನಾಟಕದ ಉತ್ತರದ ಗಡಿಯಲ್ಲಿರುವ ಇಂಡಿಯು ಉತ್ತರಕ್ಕೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆ, ಪಶ್ಚಿಮಕ್ಕೆ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆ, ದಕ್ಷಿಣಕ್ಕೆ ವಿಜಯಪುರ ತಾಲ್ಲೂಕು ಮತ್ತು ಪೂರ್ವಕ್ಕೆ ಸಿಂದಗಿ ತಾಲ್ಲೂಕುಗಳಿವೆ.

ಅವಿಭಜಿತ ವಿಜಯಪುರ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿರುವ ಬಿಎಲ್‌ಡಿಇ ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಬಂಥನಾಳದ ಸಂಗನಬಸವ ಶಿವಯೋಗಿಗಳ ಕಾರ್ಯಕ್ಷೇತ್ರ. ಲಚ್ಯಾಣದ ಕಮರಿಮಠದ ಸಿದ್ಧಲಿಂಗ ಮಹಾರಾಜರು ನೆಲೆಸಿದ ನೆಲೆವೀಡು.

ಶತ ಶತಮಾನಗಳ ಹಿಂದೆಯೇ ಪ್ರಸಿದ್ಧ ವಿದ್ಯಾಕೇಂದ್ರ ಸಾಲೋಟಗಿಯಲ್ಲಿತ್ತು ಎಂಬ ಐತಿಹ್ಯ. ಸಾಧು–ಸಂತರು ಜನ್ಮ ತಾಳಿದ ಸುಕ್ಷೇತ್ರ. ಶಿಲಾಯುಗ ಸೇರಿದಂತೆ ರಾಮಾಯಣ ಕಾಲಘಟ್ಟದ ಇತಿಹಾಸ. ಪುರಾತನ ಸ್ಥಳ ಎಂಬ ಉಲ್ಲೇಖವೂ ಈಜಿಪ್ಟ್‌ನ ಖ್ಯಾತ ಭೂಗೋಳ ಶಾಸ್ತ್ರಜ್ಞ ಟಾಲೆಮಿ ರಚಿತ ಗ್ರಂಥದಲ್ಲಿ ದಾಖಲಾಗಿದೆ.

ಭೀಮಾ ನದಿ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಹೆಚ್ಚು ಹರಿಯುವುದೇ ಇಂಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ. ಅಪರಾಧಿಕ ಚಟುವಟಿಕೆಗಳಿಂದಲೂ ಇಂಡಿ ರಾಜ್ಯದಲ್ಲೇ ಕುಖ್ಯಾತ. ಭೀಮಾ ತೀರ ಎಂದರೇ ಇಂದಿಗೂ ಬೆಚ್ಚಿ ಬೀಳುವವರು ಇದ್ದಾರೆ.

                                     

2. ಕ್ಷೇತ್ರದ ವಿಶೇಷತೆ

  • ಮಲ್ಲಪ್ಪ ಕರಬಸಪ್ಪ ಸುರಪುರ, ಆರ್.ಆರ್. ಕಲ್ಲೂರ ಹಾಗೂ ರವಿಕಾಂತ ಪಾಟೀಲರು 3 ಬಾರಿ ಆಯ್ಕೆಯಾಗಿದ್ದಾರೆ. ಇಂಡಿ ವಿಧಾನಸಭಾ ಕ್ಷೇತ್ರದ ಮತದಾರರು ಮೂವರಿಗೆ ತಲಾ ಮೂರು ಬಾರಿ ಶಾಸಕರಾಗುವ ಅವಕಾಶ ನೀಡಿದ್ದಾರೆ. ಅದರಲ್ಲೂ ರವಿಕಾಂತ ಪಾಟೀಲ ಪಕ್ಷೇತರರಾಗಿ ಹ್ಯಾಟ್ರಿಕ್‌ ವಿಜಯಭೇರಿ ಬಾರಿಸಿದ ಕ್ಷೇತ್ರವಿದು.
  • 1978, 1983, 1989ರಲ್ಲಿ ಆರ್.ಆರ್. ಕಲ್ಲೂರ ಶಾಸಕರಾದ ಆಗಿನ ಮುಖ್ಯಮಂತ್ರಿ ಗುಂಡೂರಾವ್‌ಗೆ 9 ಕೆ.ಜಿ. ತೂಕದ ಬೆಳ್ಳಿ ಪಂಪ್‌ಸೆಟ್‌ ನೀಡಿದ ಹೆಗ್ಗಳಿಕೆ ಇವರದ್ದು.
  • ಕಾಂಗ್ರೆಸ್ನಿಂದ ೨ ಬಾರಿ ಶಾಸಕರಾದ ಆರ್.ಆರ್. ಕಲ್ಲೂರರವರಿಗೆ ಭೂಸೇನಾ ನಿಗಮಪ್ರಸ್ತುತ ಹೆಸರು: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತದ ಅಧ್ಯಕ್ಷರಾಗಿದ್ದರು.
  • 1994, 1999, 2004ರಲ್ಲಿ ಪಕ್ಷೇತರರಾಗಿ ಮೊದಲ ಬಾರಿಗೆ ಹ್ಯಾಟ್ರಿಕ್‌ ವಿಜಯಭೇರಿ ದಾಖಲಿಸಿದ ಕೀರ್ತಿ ರವಿಕಾಂತ ಪಾಟೀಲರದ್ದು.
  • ಬಿ.ಜಿ.ಪಾಟೀಲಹಲಸಂಗಿರು ವಿಧಾನ ಪರಿಷತನ ಸದಸ್ಯರಾಗಿದ್ದರು.
  • 2008ರಲ್ಲಿ ಡಾ.ಸರ್ವಭೌಮ ಬಗಲಿಯವರು ಬಿಜೆಪಿಯಿಂದ ಕೇವಲ ಒಮ್ಮೆ ಆಯ್ಕೆಯಾಗಿದ್ದು ಈ ಕ್ಷೇತ್ರದ ವಿಶೇಷತೆಯಾಗಿದೆ.
  • ಕಾಂಗ್ರೆಸನ ಯಶವಂತರಾಯಗೌಡ ಪಾಟೀಲರು ಕಳೆದ 40 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮರಗೂರಿನ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು 2018ರಲ್ಲಿ ಪೂರ್ಣಗೊಳಿಸಿದ್ದು ಇವರ ಹೆಗ್ಗಳಿಕೆ.
  • ಯಶವಂತರಾಯಗೌಡ ಪಾಟೀಲರು 2018ರಲ್ಲಿ ಜೆಡಿಎಸ್-ಕಾಂಗ್ರೆಸನ ಹೆಚ್.ಡಿ.ಕುಮಾರಸ್ವಾಮಿ ಸಮ್ಮಿಸ್ರ ಸರಕಾರದ ಸಂಪುಟದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿದ್ದರು.
  • ಕ್ಷೇತ್ರದಿಂದ ಸ್ಪರ್ಧಿಸಿದ ಯಾವುದೇ ನಾಯಕರು ಇದೂವರೆಗೆ ಸಚಿವ ಸ್ಥಾನವನ್ನು ಅಲಂಕರಿಸಿಲ್ಲ.
Free and no ads
no need to download or install

Pino - logical board game which is based on tactics and strategy. In general this is a remix of chess, checkers and corners. The game develops imagination, concentration, teaches how to solve tasks, plan their own actions and of course to think logically. It does not matter how much pieces you have, the main thing is how they are placement!

online intellectual game →